Breaking News

ಟೀಚರ್ ಬೈದ್ರು ಎಂದು ದುರಂತ ಅಂತ್ಯಕಂಡ ವಿದ್ಯಾರ್ಥಿನಿ.. ಕಣ್ಣಾಲೆಗಳ ಒದ್ದೆ ಮಾಡ್ತಿವೆ ಆಕೆಯ ವಿದಾಯದ ಸಾಲುಗಳು..

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಮರಸೂರು ಮಡಿವಾಳದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ (14) ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಪೋಷಕರು ಮೃತದೇಹ ಪತ್ತೆಹಚ್ಚಿದ್ದಾರೆ. ಆತ್ಮಹತ್ಯೆಗೆ ಮುನ್ನ ಬರೆದಿದ್ದಾಳೆ ಎನ್ನಲಾದ ಪತ್ರದಲ್ಲಿ, ಶಾಲೆಯಲ್ಲಿ ನಡೆದ ಅವಮಾನ ಹಾಗೂ ತನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ ಕಾರಣ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಜೊತೆಗೆ ತಾಯಿ ಹಾಗೂ ಸಹೋದರ-ಸಹೋದರಿಯರನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಮನವಿ ಮಾಡಿದ್ದಾಳೆ. ಘಟನಾ ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶಿಕ್ಷಕರ ವಿರುದ್ಧ ಕೇಳಿಬಂದಿರುವ ಆರೋಪಗಳ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದು, ತನಿಖೆಯ ಬಳಿಕವೇ ಘಟನೆಯ ನಿಖರ ಕಾರಣ ತಿಳಿದುಬರಲಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *