Breaking News

ಮೆಡಿಕಲ್ ಸೀಟು ಕೊಡಿಸೋದಾಗಿ ವಂಚನೆ; ಮಾಜಿ ಸಚಿವರ ಸೊಸೆಗೆ 5 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ವಿಶೇಷ ನ್ಯಾಯಾಲಯ!

ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ 45 ಲಕ್ಷ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಸೊಸೆ ನಾಗವೇಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 5 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 10 ಸಾವಿರ ರೂಪಾಯಿ ದಂಡವೂ ವಿಧಿಸಲಾಗಿದೆ. ಪ್ರಕಾಶ್ ಕುಮಾರ್ ಯರಪ್ಪ ನೀಡಿದ ದೂರಿನ ಮೇರೆಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೆಡಿಕಲ್ ಸೀಟ್ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ 45 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿರುವ ಆರೋಪದಡಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಮೊದಲ ಆರೋಪಿ ಜೆ. ನರಸಿಂಹ ಸ್ವಾಮಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ವಿರುದ್ಧದ ಪ್ರಕರಣ ಕೈಬಿಡಲಾಗಿತ್ತು. ಎರಡನೇ ಆರೋಪಿಯಾಗಿದ್ದ ನಾಗವೇಣಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಐಪಿಸಿ ಸೆಕ್ಷನ್ 420 ಅಡಿ 5 ವರ್ಷ ಜೈಲು ಹಾಗೂ ಸೆಕ್ಷನ್ 120B ಅಡಿ 3 ವರ್ಷ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿದೆ. ತೀರ್ಪಿನ ಬಳಿಕ ಪೊಲೀಸರು ನಾಗವೇಣಿ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *