ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್ನಲ್ಲಿ ₹10 ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಹಂಚಿನಾಳ ಗ್ರಾಮದ ಮೇಘನಾಥ್ (42) ಮೃತಪಟ್ಟ ವ್ಯಕ್ತಿ. ಬಾಟಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ವ್ಯಕ್ತಿ ಮತ್ತು ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಸ್ನೇಹಿತನ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಬಂದ ಮೇಘನಾಥ್, ಬಂಕ್ ಸಿಬ್ಬಂದಿಯನ್ನು ಪ್ರಶ್ನಿಸಿದ ವೇಳೆ ಎರಡೂ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯ ವೇಳೆ ಕಟ್ಟಿಗೆಯಿಂದ ಹೊಡೆದಾಡಿದಾಗ ಮೇಘನಾಥ್ ಅವರ ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇಡಪನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

