Breaking News

ರಾಜ್ಯದಲ್ಲಿ ಮತ್ತೊಂದು ಲವ್‌ ಜಿಹಾದ್‌? ಹಿಂದೂ ಯುವತಿಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ ನವಾಜ್‌

ಬೆಂಗಳೂರು: ವರ್ತೂರಿನಲ್ಲಿ ಯುವತಿಯ ಮನೆಗೆ ನುಗ್ಗಿದ ಯುವಕನೊಬ್ಬ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬದ ವಿರೋಧದಿಂದ ಯುವತಿ ಆತನಿಂದ ದೂರವಾಗಿದ್ದು, ಬೇರೆ ಮದುವೆಗೆ ಒಪ್ಪಿದ್ದರಿಂದ ಆಕ್ರೋಶಗೊಂಡ ಯುವಕ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಯುವತಿ ಹಾಗೂ ಯುವಕ ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದ್ದು, ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *