ರಾಯಚೂರು ಜಿಲ್ಲೆಯ ಲಿಂಗಸುಗೂರು-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ಬಳಿಕ ಆಕೆ ಚಲಾಯಿಸುತ್ತಿದ್ದ ಸ್ಕೂಟಿಗೆ ಟಾಟಾ ಏಸ್ ವಾಹನದಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ. ಮದ್ಯದ ಅಮಲಿನಲ್ಲಿದ್ದ ಚಾಲಕ ಮಹಿಳೆಯನ್ನು ಚುಡಾಯಿಸಿದ ಬಳಿಕ ಆಕೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ವಾಹನದಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗುರುಲಿಂಗಮ್ಮ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈರಲ್ ವಿಡಿಯೋ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

