Breaking News

ಬೆಂಗಳೂರಿನಲ್ಲಿ 1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು;

ಬೆಂಗಳೂರು ಹೊರವಲಯದ ಬನ್ನೇರುಘಟ್ಟ-ಜಿಗಣಿ ಮುಖ್ಯರಸ್ತೆಯಲ್ಲಿ ₹1.79 ಕೋಟಿ ನಗದು ಸಾಗಿಸುತ್ತಿದ್ದ ಎಟಿಎಂ ಕ್ಯಾಶ್ ವ್ಯಾನ್‌ನ್ನು ಗುರಿಯಾಗಿಸಿಕೊಂಡು ದರೋಡೆಗೆ ಸಂಚು ರೂಪಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯೂ-ಟರ್ನ್ ಪಡೆಯುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿ “ನಿಮ್ಮ ವಾಹನ ನಮ್ಮ ಬೈಕ್‌ಗೆ ಟಚ್ ಆಗಿದೆ” ಎಂದು ಕಿಡಿಗೇಡಿಗಳು ಜಗಳ ಆರಂಭಿಸಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸುತ್ತಿದ್ದಂತೆ ವಾಹನದ ಕೀಲಿಕೈ ಕಿತ್ತುಕೊಂಡು ಪರಾರಿಯಾಗಿದ್ದಾರೆ. ವಾಹನವನ್ನು ಲಾಕ್ ಮಾಡಿ ಸಿಬ್ಬಂದಿಯನ್ನು ಅಸಹಾಯಕರನ್ನಾಗಿಸಿ ಹಣ ದೋಚುವುದು ಅವರ ಉದ್ದೇಶವಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೀ ಎಗರಿಸಿ ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *