Breaking News

ಕೇವಲ 10 ರೂಪಾಯಿಗಾಗಿ ನಡುರಸ್ತೆಯಲ್ಲೇ ಮಾರಾಮಾರಿ: ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ!

ರಾಯಚೂರು ಜಿಲ್ಲೆಯ ಇಡಪನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್‌ನಲ್ಲಿ ಕೇವಲ 10 ರೂಪಾಯಿ ಚಿಲ್ಲರೆ ವಿಚಾರವಾಗಿ ಆರಂಭವಾದ ಜಗಳ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೇಘನಾಥ್ (42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪೆಟ್ರೋಲ್ ಬಂಕ್ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆದ ಬಳಿಕ ಮೇಘನಾಥ್ ತಮ್ಮ ಸ್ನೇಹಿತನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದು, ನಂತರ ಎರಡೂ ಕಡೆಯವರ ನಡುವೆ ದಪ್ಪನೆಯ ಕಟ್ಟಿಗೆಗಳಿಂದ ಮಾರಾಮಾರಿ ನಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡ ಮೇಘನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇಡಪನೂರು ಪೊಲೀಸರು ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಹತ್ಯೆಗೆ ಹಳೆಯ ದ್ವೇಷ ಕಾರಣವೇ ಅಥವಾ ಕ್ಷಣಿಕ ಕೋಪವೇ ಎಂಬುದು ಸೇರಿದಂತೆ ಪ್ರಕರಣದ ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *