ದಾವಣಗೆರೆಯ ಸರಸ್ವತಿ ನಗರದ ಖಾಸಗಿ ಜಿಮ್‌ನ ಟ್ರೈನರ್ ಹಾಗೂ ಮಾಲೀಕ ಇಸ್ಮಾಯಿಲ್ ವಿರುದ್ಧ ಫಿಟ್ನೆಸ್ ತರಬೇತಿ ನೆಪದಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ಮೂರು ವರ್ಷಗಳಲ್ಲಿ 10ಕ್ಕೂ ಹೆಚ್ಚು ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಜಿಮ್‌ಗೆ ಬರುವ ಮಹಿಳೆಯರೊಂದಿಗೆ ಆತ್ಮೀಯತೆ ಬೆಳೆಸಿ, ಲೈಂಗಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದನು. ಕೆಲವರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಶ್ರೀರಾಮ ಸೇನೆ ಕಾರ್ಯಕರ್ತರು ಜಿಮ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಈ ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಇನ್ನೂ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

