ಶಿವಮೊಗ್ಗ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಶಿವಮೊಗ್ಗದ ಶ್ರೀನಿಧಿ ಎಂಬಾತನ ವಿರುದ್ಧ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊರ ರಾಜ್ಯದ ಯುವತಿಯನ್ನು ಗರ್ಭಿಣಿ ಮಾಡಿ ಶ್ರೀನಿಧಿ ಎಂಬಾತ ಕೈಕೊಟ್ಟಿದ್ದಾನೆ. ಪ್ರೀತಿ ಪ್ರೇಮದ ಹೆಸರಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ದುರ್ಗಿಗುಡಿಯ ಅನುರಾಧ ಕ್ರಿಯೇಶನ್ಸ್ ನಲ್ಲಿ ನಡೆದಿದೆ. ಯುವತಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಮದುವೆಗೆ ನಿರಾಕರಿಸಿದ್ದಾನೆ. ಶಿವಮೊಗ್ಗದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ದುರ್ಗಿಗುಡಿ ಪ್ರದೇಶದ ಟೈಲರ್ ಶ್ರೀನಿಧಿ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಅನುರಾಧ ಕ್ರಿಯೇಶನ್ಸ್ ನಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಶ್ರೀನಿಧಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

