Breaking News

ಪೆಟ್ರೋಲ್ ಬಂಕ್‌ನಲ್ಲಿ ಕೇವಲ ಹತ್ತು ರೂಪಾಯಿಗಾಗಿ ಬಿತ್ತು ಹೆ*ಣ: ಆರು ಜನ ಸಿಬ್ಬಂದಿ ಅರೆಸ್ಟ್!

ಯಾದಗಿರಿ ಜಿಲ್ಲೆಯ ಹಂಚಿನಾಳ ಕ್ಯಾಂಪ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಕೇವಲ 10 ರೂಪಾಯಿ ಬಾಕಿ ಹಣದ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ಗಲಾಟೆ ಬಿಡಿಸಲು ಮಧ್ಯಪ್ರವೇಶಿಸಿದ್ದ ಗಿಲ್ಲೆಸುಗೂರು ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಮೇಘನಾಥ್ (42) ಅವರನ್ನು ಬಂಕ್ ಸಿಬ್ಬಂದಿ ದೊಣ್ಣೆಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್ ಸಿಬ್ಬಂದಿಗಳಾದ ರವಿ, ವೀರೇಶ್, ನರಸಿಂಹ, ಮಾರೆಪ್ಪ, ರಮೇಶ್ ಮತ್ತು ಪ್ರವೀಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಮತ್ತು ನಾಗರಾಜ್ 110 ರೂಪಾಯಿ ಮೌಲ್ಯದ ಪೆಟ್ರೋಲ್ ಹಾಕಿಸಿಕೊಂಡು 100 ರೂಪಾಯಿ ಮಾತ್ರ ನೀಡಿದ್ದರಿಂದ ಉಳಿದ 10 ರೂಪಾಯಿ ವಿಚಾರವಾಗಿ ವಾಗ್ವಾದ ಆರಂಭವಾಗಿತ್ತು ಎನ್ನಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಇಡಪನೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು, ಬಂಧಿತ ಆರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *