ತೀರ್ಥಹಳ್ಳಿ: ಕೋಣಂದೂರಿನ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿರುವ ಆರೋಪದಡಿ ಇಬ್ಬರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ. ದೂರಿನ ಪ್ರಕಾರ, ಮುಖ್ಯ ಆರೋಪಿ ಆಸಿಫ್ ಎಂಬಾತ ಯುವತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಮೂರೂ ತಿಂಗಳ ಹಿಂದೆ ಪರಿಚಯಿಸಿಕೊಂಡು, ಬಳಿಕ ಆಕೆಯ ಫೋಟೋವನ್ನು ಅಸಭ್ಯವಾಗಿ ಎಡಿಟ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಲವು ಬಾರಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ. ಆಸಿಫ್ ಜೊತೆ ಕೆಲಸ ಮಾಡುತ್ತಿದ್ದ ಇನ್ನೋರ್ವ ಆರೋಪಿ ಸಾಹಿಲ್, ಆಸಿಫ್ ಹಾಗೂ ಯುವತಿ ಜೊತೆಗಿರುವ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಯುವತಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪ್ರತಿರೋಧಿಸಿದಾಗ ಇಡೀ ಊರಿಗೆ ವಿಚಾರ ತಿಳಿಸುವುದಾಗಿ ಬೆದರಿಸಿದ್ದ ಅಷ್ಟು ಮಾತ್ರವಲ್ಲದೆ ಮೂರನೇ ಆರೋಪಿ ಸುಹೇಲ್, ಯುವತಿಯ ಮೊಬೈಲ್‌ಗೆ ಅಸಭ್ಯವಾಗಿ ಮೆಸೇಜ್ ಕಳುಹಿಸಿ, ಕಾಲೇಜಿಗೆ ಹೋಗುವಾಗ-ಬರುವಾಗ ಹಿಂಬಾಲಿಸಿ ನಿರಂತರ ಕಿರುಕುಳ ನೀಡುತ್ತಿದ್ದ.ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ತೀರ್ಥಹಳ್ಳಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಇನ್ನೋರ್ವ ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

