Breaking News

ದಾವಣಗೆರೆ: ಜಿಮ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಶೋಷಣೆ. ಬ್ಲಾಕ್‌ಮೇಲ್‌!

ದಾವಣಗೆರೆಯಲ್ಲಿ ಜಿಮ್‌ಗೆ ಬರುತ್ತಿದ್ದ ಯುವತಿಯರು ಮತ್ತು ಗೃಹಿಣಿಯರನ್ನು ಲೈಂಗಿಕವಾಗಿ ಶೋಷಿಸಿ, ಅಶ್ಲೀಲ ಫೋಟೋ-ವಿಡಿಯೋಗಳ ಮೂಲಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಒಂದೇ ಸಮುದಾಯದ 13ಕ್ಕೂ ಹೆಚ್ಚು ಮಹಿಳೆಯರು ಈ ಕೃತ್ಯಕ್ಕೆ ಒಳಗಾಗಿರುವ ಆರೋಪ ಕೇಳಿಬಂದಿದೆ. ಆರೋಪಿ ಜಿಮ್ ಟ್ರೈನರ್ ಮದುವೆಯಾಗಿ ಮೂವರು ಮಕ್ಕಳಿದ್ದರೂ ತಾನು ಅವಿವಾಹಿತ ಎಂದು ನಂಬಿಸಿ, ವಿವಿಧ ಹೆಸರಿನಲ್ಲಿ ಮಹಿಳೆಯರ ಪರಿಚಯ ಬೆಳೆಸಿ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಬಳಿಕ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯಗಳಿಂದ ಹಲವು ಮಾಹಿತಿ ಹೊರಬಂದಿದೆ. ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಶ್ರೀರಾಮ ಸೇನೆ ಹಾಗೂ ಹಿಂದೂ ಜಾಗರಣ ವೇದಿಕೆ ಜಿಮ್ ಮುಂದೆ ಪ್ರತಿಭಟನೆ ನಡೆಸಿ ಬೀಗ ಹಾಕಿವೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *