Breaking News

ರಾಜ್ಯದಲ್ಲಿ ಹೀನ ಕೃತ್ಯ : ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಗುಪ್ತಾಂಗ ಪ್ರದರ್ಶನ : ಕಂಡಕ್ಟರ್ ಅರೆಸ್ಟ್!

ಮಂಗಳೂರು-ವಿಟ್ಲ ಮಾರ್ಗದ ಖಾಸಗಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ, ಅಸಭ್ಯ ಸನ್ನೆ ಹಾಗೂ ಗುಪ್ತಾಂಗ ಪ್ರದರ್ಶಿಸಿದ ಆರೋಪದ ಮೇಲೆ ಬಸ್ ಕಂಡಕ್ಟರ್ ಇರ್ಫಾನ್ (32)ನನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 9ರಂದು ಸಂಜೆ ಸಂಚರಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿಯರನ್ನು ಹಿಂದಿನ ಸೀಟಿಗೆ ಬರುವಂತೆ ಸನ್ನೆ ಮಾಡಿ, ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *