ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತಾಯಿ ಹಾಗೂ ಇಬ್ಬರು ಪುತ್ರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬದ ಮುಖ್ಯಸ್ಥ ರಾಘವೇಂದ್ರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಕುಟುಂಬದ ಕ್ರೇಟಾ ಕಾರು ಅಪಘಾತಕ್ಕೀಡಾಗಿದೆ. ಕಾರು ಚಲಾಯಿಸುತ್ತಿದ್ದ ಹರಿವೆಂಕಟರಾಮ್ ಹಿಂದಿನ ರಾತ್ರಿ ನಿದ್ದೆ ಮಾಡಿರದ ಕಾರಣ ನಿದ್ದೆ ಮಂಪರಿನಲ್ಲಿ ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮೃತರನ್ನು ಸತ್ಯವೇಣಿ (38), ಹರಿವೆಂಕಟರಾಮ್ (20) ಹಾಗೂ ಜಶ್ವಂತ್ (18) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

