Breaking News

ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ರಕ್ತಪಾತ: ಮೂವರನ್ನು ಭೀಕರವಾಗಿ ಕೊಲೆ ಮಾಡಿ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ 34 ವರ್ಷದ ಪ್ರಶಾಂತ್ ಎಂಬಾತ ತನ್ನ ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಹಾಗೂ ಮಾವ ಸತೀಶ್ ಅವರನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಕೃತ್ಯದ ಬಳಿಕ ಓಡಿಹೋಗಲು ಯತ್ನಿಸಿದ ಆತನನ್ನು ಮನೆ ಮಾಲೀಕರು ಕೋಣೆಯಲ್ಲಿ ಹಾಕಿ ಲಾಕ್ ಮಾಡಿದ್ದಾರೆ. ಇದರಿಂದ ಹೆದರಿದ ಪ್ರಶಾಂತ್ ಪೊಲೀಸರ ಬಂಧನದ ಭೀತಿಯಿಂದ ಅದೇ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಪ್ರಶಾಂತ್ ಕಳೆದ ಒಂದು ವರ್ಷದಿಂದ ಕೆಲಸವಿಲ್ಲದೆ ಮನೆಯಲ್ಲೇ ಖಾಲಿ ಕುಳಿತಿದ್ದನು. ಕೆಲಸಕ್ಕೆ ಹೋಗದ ವಿಚಾರ ಹಾಗೂ ಊಟದ ಸಣ್ಣಪುಟ್ಟ ಕಾರಣಗಳಿಗಾಗಿ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿತ್ತು. ಇದೇ ನಿರುದ್ಯೋಗದ ಬೇಸರ ಮತ್ತು ಮಾನಸಿಕ ಖಿನ್ನತೆಯಿಂದ ಹತಾಶೆಗೊಂಡಿದ್ದ ಆತ ಈ ಭೀಕರ ಹತ್ಯಾಕಾಂಡ ನಡೆಸಿದ್ದಾನೆ ಎಂದು ಶಂಕಿಸಲಾಗಿದೆ. ಘಟನೆ ನಡೆದ ದಿನ ಬೆಳಿಗ್ಗೆ ಪ್ರಶಾಂತ್ ತಂದೆ ಚಿಕ್ಕಣ್ಣ ಇಸ್ತ್ರೀ ಅಂಗಡಿ ಕೆಲಸಕ್ಕೆ ಹೋಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಮಾಕ್ಷಿಪಾಳ್ಯ ಪೊಲೀಸರು ಮತ್ತು ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ನಾಲ್ಕೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *