ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿ 9 ತಿಂಗಳ ಗರ್ಭಿಣಿ ಸವಿತಾ (21) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಪಾಳ ಮೂಲದ ದಂಪತಿ ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ವಾಸವಿದ್ದು, ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದರು. ಮೃತಳ ಸಾವು ಸಹಜವಲ್ಲ, ಪತಿ ಹೇಮರಾಜು ಕೊಲೆ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೂರ್ಯನಗರ ಠಾಣೆ ಪೊಲೀಸರು ಹೇಮರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸವಿತಾ ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿಯ ಬಳಿಕವೇ ತಿಳಿಯಲಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಗರ್ಭಿಣಿ ಹಾಗೂ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿರುವ ಘಟನೆ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

