Breaking News

ಬೆಂಗಳೂರಲ್ಲಿ ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನ್ಯಾಪ್‌ ಮಾಡಿ 4.5 ಲಕ್ಷ ರೂ. ದೋಚಿದ್ದ ನಾಲ್ವರ ಬಂಧನ

ಬೆಂಗಳೂರು: ಜ್ಯೋತಿಷಿಯನ್ನು ಅಪಹರಿಸಿ ಹಲ್ಲೆ ನಡೆಸಿ ಹಣ ದೋಚಿದ ಪ್ರಕರಣದಲ್ಲಿ ಸಂಪಿಗೆಹಳ್ಳಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ ಅಂತ್ಯದಲ್ಲಿ ನಡೆದ ಈ ಕೃತ್ಯದಲ್ಲಿ ಆರೋಪಿಗಳು ಜ್ಯೋತಿಷಿಯನ್ನು ಕಾರಿನಲ್ಲಿ ಅಪಹರಿಸಿ ತುಮಕೂರು ಸಮೀಪದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ, ಯುಪಿಐ ಮೂಲಕ ಹಣ ವರ್ಗಾಯಿಸುವಂತೆ ಬೆದರಿಕೆ ಹಾಕಿದ್ದರು. ಬಂಧಿತ ಆರೋಪಿಗಳನ್ನು ಆರಿಫ್, ಆದಿಲ್, ಇಮ್ರಾನ್ ಹಾಗೂ ಕದೀರ್ ಎಂದು ಗುರುತಿಸಲಾಗಿದೆ. ಜ್ಯೋತಿಷಿ ನೀಡಿದ ಭರವಸೆಯಂತೆ ಜೀವನದಲ್ಲಿ ಬದಲಾವಣೆ ಆಗಿಲ್ಲ ಎಂಬ ಅಸಮಾಧಾನದಿಂದ, ಪೂಜೆಗೆ ಪಾವತಿಸಿದ್ದ ಹಣವನ್ನು ವಾಪಸ್ ಪಡೆಯುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳು ಜ್ಯೋತಿಷಿಯ ಖಾತೆಯಿಂದ ₹13 ಸಾವಿರ ವರ್ಗಾಯಿಸಿಕೊಂಡು, ರಾತ್ರಿಯಿಡೀ ಬಂಧನದಲ್ಲಿರಿಸಿ ಹಿಂಸೆ ನೀಡಿ ಬಳಿಕ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದರು. ತಾರಿಕ್ ಹುಸೇನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *