Breaking News

ಪ್ರಿಯಕರನ ಜೊತೆ ಹೆಂಡ್ತಿ ಪರಾರಿ: ಇಬ್ಬರು ಮಕ್ಕಳಿಗೆ ವಿದ್ಯುತ್ ಶಾಕ್ ಕೊಟ್ಟು ಹತ್ಯೆ ಮಾಡಿ ತಂದೆ ಆತ್ಮಹತ್ಯೆ!

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಪತ್ನಿ ಬೇರೊಬ್ಬರೊಂದಿಗೆ ತೆರಳಿದ ಬಳಿಕ ಮಾನಸಿಕವಾಗಿ ನೊಂದಿದ್ದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಮಾರಿಯಾ ಮೈಕೆಲ್, ಪುತ್ರಿ ಮಾರಿಯಾ ನಿರೋಷಾ ಹಾಗೂ ಪುತ್ರ ಮಾರಿಯಾ ಕೆನಿಸ್ಟನ್ ಎಂದು ಗುರುತಿಸಲಾಗಿದೆ. ಕುಟುಂಬವು ಸವೇರಿಯಾರ್ಪುರಂ ಪ್ರದೇಶದಲ್ಲಿ ವಾಸವಾಗಿತ್ತು. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಗುರುವಾರ ರಾತ್ರಿ ಊಟದ ಬಳಿಕ ಮೈಕೆಲ್ ಮಕ್ಕಳ ಕೈ-ಕಾಲುಗಳನ್ನು ವಿದ್ಯುತ್ ತಂತಿಯಿಂದ ಕಟ್ಟಿ ವಿದ್ಯುತ್ ಪ್ರವಹಿಸಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಪತ್ನಿ ಮನೆ ಬಿಟ್ಟು ತೆರಳಿದ್ದರಿಂದ ಅವರು ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮರುದಿನ ಮನೆಯ ಬಾಗಿಲು ತೆರೆಯದಿರುವುದನ್ನು ಗಮನಿಸಿದ ಮೈಕೆಲ್ ಅವರ ತಂದೆ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಮೂವರೂ ಮೃತಪಟ್ಟಿರುವುದು ಪತ್ತೆಯಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *