Breaking News

ಚಿಕ್ಕಬಳ್ಳಾಪುರ ನ್ಯಾಯಾಲಯದ ಜಡ್ಜ್ ಚೇರ್​​​ಗೆ ಮಾಟ-ಮಂತ್ರ, ವೃದ್ಧೆ ಅರೆಸ್ಟ್!

ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ತಮ್ಮ ಪರವಾಗಿ ತೀರ್ಪು ಬರಲೆಂಬ ಮೂಢನಂಬಿಕೆಯಿಂದ ನ್ಯಾಯಾಧೀಶರ ಆಸನದ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಚೆಲ್ಲಿ ವಾಮಾಚಾರ ನಡೆಸಿದ ಆರೋಪದಡಿ 65 ವರ್ಷದ ಮಂಜುಳಾ ಎಂಬ ವೃದ್ಧೆಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಈ ಕೃತ್ಯ ನ್ಯಾಯಾಲಯದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳ ಪರಿಶೀಲನೆ ವೇಳೆ ಘಟನೆ ಬೆಳಕಿಗೆ ಬಂದಿದೆ. ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ನೇತ್ರಾ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತೆಯ ವಿರುದ್ಧ ಕರ್ನಾಟಕ ಅಮಾನವೀಯ ದುಷ್ಟಪದ್ಧತಿ ಹಾಗೂ ವಾಮಾಚಾರ ಪ್ರತಿಬಂಧಕ ಮತ್ತು ನಿರ್ಮೂಲನಾ ಕಾಯ್ದೆ–2017ರಡಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *