Breaking News

ನಾಪತ್ತೆಯಾಗಿದ್ದ ವಿವಾಹಿತೆ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆ!

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬದನೂರು ಗ್ರಾಮದ ಅನುಸೂಯಾ (30) ಅವರು ನಾಪತ್ತೆಯಾದ ನಾಲ್ಕು ದಿನಗಳ ಬಳಿಕ ಕಬ್ಬಿನ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಕೊಲೆಯ ಹಿಂದೆ ಅನೈತಿಕ ಸಂಬಂಧದ ಹಗೆತನವಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಿಯಕರ ಸೋಮಪ್ಪ ಹಳ್ಳಿ ವಿರುದ್ಧ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೊಂದೆಡೆ, ಬೀದರ್ ಜಿಲ್ಲೆಯ ಹಾಳಗೋರ್ಟಾ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಅನಿತಾ (32) ಅವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *