ಉಡುಪಿ ನಗರಸಭೆಯ ಪೌರ ಕಾರ್ಮಿಕರ ಪ್ರಭಾರ ಮೇಲ್ವಿಚಾರಕರೊಬ್ಬರಿಗೆ ₹10 ಲಕ್ಷ ನೀಡುವಂತೆ ಬೇಡಿಕೆ ಇಟ್ಟು, ಇಲ್ಲದಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಯೋಗೀಶ್ ಪ್ರಭು, ವಿನಯ ಕುಮಾರ್ ಹಾಗೂ ಸ್ಮಿತಾ ಬಿ. ಬಂಗೇರ ಬಂಧಿತರು. ಆರೋಪಿಗಳು ಕೆಲಸದಲ್ಲಿ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿ, ಬಳಿಕ ₹10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಮೇಲ್ವಿಚಾರಕರು ₹2 ಲಕ್ಷ ನೀಡಿದ್ದು, ಉಳಿದ ₹8 ಲಕ್ಷ ನೀಡುವಂತೆ ನಿರಂತರವಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಹಣ ನೀಡಲು ನಿರಾಕರಿಸಿದ ಬಳಿಕ ಮಹಿಳೆಯ ಹೆಸರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲಾಗಿತ್ತು. ನಂತರವೂ ಉಳಿದ ಹಣಕ್ಕಾಗಿ ಬೆದರಿಕೆ ಮುಂದುವರಿದ ಹಿನ್ನೆಲೆಯಲ್ಲಿ ಸಂತ್ರಸ್ತರು ದೂರು ನೀಡಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

