Breaking News

ಒಂಟಿ ಯುವತಿ ಮನೆಯೊಳಗೆ ನುಗ್ಗಿದ ಡೆಲಿವರಿ ಬಾಯ್ – ಅಶ್ಲೀಲ ವರ್ತನೆ ವಿಡಿಯೋ ಸೆರೆ!

ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವ ಘಟನೆ ಬೆಳಕಿಗೆ ಬಂದಿದೆ. ಫ್ಲಿಪ್‌ಕಾರ್ಟ್ ಹಾಗೂ ಮಿಂತ್ರಾ ಪರವಾಗಿ ಕೆಲಸ ಮಾಡುತ್ತಿದ್ದ ಡೆಲಿವರಿ ಏಜೆಂಟ್‌ ಒಬ್ಬ, ಒಂಟಿಯಾಗಿದ್ದ ಯುವತಿಯ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಯುವತಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಮನೆಗೆ ಒಳಗೆ ಬರಲು ಅನುಮತಿ ನಿರಾಕರಿಸಿದ್ದರೂ ಡೆಲಿವರಿ ಏಜೆಂಟ್ ಬಲವಂತವಾಗಿ ಪ್ರವೇಶಿಸಿ ಶೌಚಾಲಯ ಬಳಸಿದ್ದಾನೆ. ಬಳಿಕ ಹೊರಡುವ ವೇಳೆ ಯುವತಿಯ ಎದುರೇ ಖಾಸಗಿ ಅಂಗಾಂಗ ಪ್ರದರ್ಶಿಸಿ ವಿಕೃತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ಯುವತಿ ಸಾಮಾಜಿಕ ಜಾಲತಾಣದ ಮೂಲಕ ನ್ಯಾಯಕ್ಕಾಗಿ ಮನವಿ ಮಾಡಿದ್ದು, ಮಹಿಳೆಯರ ಸುರಕ್ಷತೆ ಕುರಿತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *