Breaking News

ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 4.22 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಸುಮಾರು ₹4.22 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಆರೋಪಿಯು ಲಗೇಜ್ ಬ್ಯಾಗ್‌ನಲ್ಲಿ ಗಾಂಜಾವನ್ನು ಅಡಗಿಸಿಟ್ಟು ಸಾಗಿಸಲು ಯತ್ನಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಕ್ರಮ ಸಾಗಾಟ ಬಯಲಾಗಿ, ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಇತ್ತೀಚಿನ ವಾರಗಳಲ್ಲಿ ಇದೇ ರೀತಿಯ ಹಲವು ಕಾರ್ಯಾಚರಣೆಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಮೆಸ್ಕಲಿನ್ ಮಾದಕ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿ, ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *