Breaking News

16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ! ಖ್ಯಾತ ಕಿರುತೆರೆ ನಟ ಅರೆಸ್ಟ್

16 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಿಂದಿ ಕಿರುತೆರೆ ನಟ ರೋಹಿತ್ ಚಾಂಡೆಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಕುಟುಂಬದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 5ರಂದು ಬಾಲಕಿಯನ್ನು ಹಿಂಬಾಲಿಸುವುದು, ಪದೇ ಪದೇ ಸಂಪರ್ಕಿಸಲು ಪ್ರಯತ್ನಿಸುವುದು, ಕಿರುಕುಳ ನೀಡುವುದು ಹಾಗೂ ಹಲ್ಲೆ ನಡೆಸಿದ ಆರೋಪಗಳು ದಾಖಲಾಗಿವೆ. ಪ್ರಕರಣ ದಾಖಲಾದ ಬಳಿಕ ದಹಿಸರ್‌ನಲ್ಲಿರುವ ನಿವಾಸದಿಂದ ಆರೋಪಿಯನ್ನು ಬಂಧಿಸಿ ವಿಶೇಷ ಪೋಕ್ಸೋ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣ ಸಂಬಂಧ ಡಿಜಿಟಲ್ ಸಾಕ್ಷ್ಯಗಳು, ಕರೆ ವಿವರಗಳು ಹಾಗೂ ಇತರ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ. ರೋಹಿತ್ ಚಾಂಡೆಲ್ ‘ಕಾಶಿಬಾಯಿ ಬಾಜಿರಾವ್ ಬಲ್ಲಾಳ್’, ‘ಪಾಂಡ್ಯ ಸ್ಟೋರ್’ ಸೇರಿದಂತೆ ಹಲವು ಹಿಂದಿ ಧಾರಾವಾಹಿಗಳ ಮೂಲಕ ಜನಪ್ರಿಯತೆ ಗಳಿಸಿದ್ದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *