Breaking News

ಬಾಗಲಕೋಟೆಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ; 450 ಕೆಜಿ ಶ್ರೀಗಂಧ ಜಪ್ತಿ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಯಡಹಳ್ಳಿಯ ಚಿಂಕಾರ ವನ್ಯಜೀವಿ ಧಾಮ ಹಾಗೂ ಅಮಲಝರಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ್ದ 450 ಕೆಜಿ ತೂಕದ ಕೋಟ್ಯಂತರ ರೂಪಾಯಿ ಮೌಲ್ಯದ ಶ್ರೀಗಂಧದ ಕಟ್ಟಿಗೆಗಳನ್ನು ಜಪ್ತಿ ಮಾಡಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಮೂಲದ ಅಂತರರಾಜ್ಯ ಕಳ್ಳರ ಜಾಲವನ್ನು ಪತ್ತೆಹಚ್ಚಿದ್ದಾರೆ. ಸ್ಥಳೀಯವಾಗಿ ಶ್ರೀಗಂಧದ ಮರಗಳನ್ನು ಕಡಿದು ಸಾಗಿಸಲು ಸಂಚು ರೂಪಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಸ್ವಪ್ನಿಲ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಪ್ರದೀಪ ರಾಠೋಡ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬೀಳಗಿ ವಲಯ ಅರಣ್ಯಾಧಿಕಾರಿ ಅಮೃತ ಗಂಡೋಸಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ದಂಧೆಯ ಹಿಂದಿರುವ ಇತರರ ಪತ್ತೆಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *