ಬೆಂಗಳೂರು ಹೊರವಲಯದ ನೆಲಮಂಗಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಘಟನೆ ಬಳಿಕ ಆರೋಪಿಯನ್ನು ಪ್ರಯಾಣಿಕರು ಹಿಡಿದು ಪ್ರಶ್ನಿಸಿದ್ದು, ಬಸ್ನಲ್ಲೇ ಧರ್ಮದೇಟು ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣದ ವೇಳೆ ಗುಲಾಬಿ ಬಣ್ಣದ ಶರ್ಟ್ ಧರಿಸಿದ್ದ ವ್ಯಕ್ತಿ, ಬಿಳಿ ಬಣ್ಣದ ಟಾಪ್ ಧರಿಸಿದ್ದ ಯುವತಿಯನ್ನು ಪದೇ ಪದೇ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ಮೌನವಾಗಿ ಕಣ್ಣೀರು ಹಾಕುತ್ತಿದ್ದಳು. ಪಕ್ಕದಲ್ಲಿದ್ದ ಮಹಿಳಾ ಪ್ರಯಾಣಿಕರು ವಿಚಾರಿಸಿದಾಗ ಕಿರುಕುಳದ ವಿಷಯ ಬೆಳಕಿಗೆ ಬಂದಿದೆ. ತಕ್ಷಣ ಮಹಿಳಾ ಪ್ರಯಾಣಿಕರು ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಇತರ ಪ್ರಯಾಣಿಕರು ಆರೋಪಿಯನ್ನು ಪ್ರಶ್ನಿಸಿ ಯುವತಿಯ ಪರ ನಿಂತಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

