Breaking News

ಯುವತಿ ಮೈಮುಟ್ಟಿದ ಕಾಮುಕನಿಗೆ KSRTC ಬಸ್‌ನಲ್ಲೇ ತಗೋ ತಗೋ ಅಂತ ಗೂಸಾ ಕೊಟ್ಟ ಪ್ರಯಾಣಿಕರು

ಬೆಂಗಳೂರು: ನೆಲಮಂಗಲದ ಬಳಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಸಹಪ್ರಯಾಣಿಕನೊಬ್ಬ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿ ಅಳುತ್ತಿರುವುದನ್ನು ಗಮನಿಸಿದ ಸಹಪ್ರಯಾಣಿಕರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ಮಹಿಳೆಯರು ಮಧ್ಯಪ್ರವೇಶಿಸಿ ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಂಡಕ್ಟರ್ ಬಸ್ ನಿಲ್ಲಿಸಿ ಆರೋಪಿಯನ್ನು ನೆಲಮಂಗಲ ಟೋಲ್ ಸಮೀಪ ಬಸ್‌ನಿಂದ ಕೆಳಗಿಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸ್ ಠಾಣೆ ಅಥವಾ ಕೆಎಸ್‌ಆರ್‌ಟಿಸಿ ಇಲಾಖೆಯಲ್ಲಿ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *