ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಭೀಕರ ತಿರುವು ಪಡೆದು, ಪತ್ನಿಯನ್ನು ಕರೆತರಲು ಅತ್ತೆ ಮನೆಗೆ ಹೋದ 35 ವರ್ಷದ ಬಾಬುಸಾಬ್ ಜಮಾದಾರ್ ಹಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಸ್ನೇಹಿತ ಅಪ್ಪಾಲಾಲ ಮಕಾಸಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸೌಂದರ್ಯ, ಆಕೆಯ ತಾಯಿ, ಸೋದರ ಹಾಗೂ ಮತ್ತೊಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

