Breaking News

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಕುಟುಂಬ ಕಲಹ: ಎರಡು ತೊಲೆ ಬಂಗಾರಕ್ಕಾಗಿ ಅತ್ತೆಯ ಜೀವ ತೆಗೆದ ಅಳಿಯ

ಬೆಂಗಳೂರು: ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಿ ಅಗ್ರಹಾರದಲ್ಲಿ ಕೇವಲ ಎರಡು ತೊಲೆ ಚಿನ್ನದ ವಿಚಾರಕ್ಕೆ ಅಳಿಯ ಅಕ್ಬರ್, ಅತ್ತೆ ರೋಶನಬಿ (45) ಅವರ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ ಪರಿಣಾಮ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೂರು ತಿಂಗಳ ಹಿಂದೆ ಜನಿಸಿದ ಮಗುವಿನ ಸಂದರ್ಭದಲ್ಲಿ ಎರಡು ತೊಲೆ ಚಿನ್ನ ನೀಡುವುದಾಗಿ ಅತ್ತೆ ಹೇಳಿದ್ದರೂ, ನೀಡದ ಕಾರಣ ಇಬ್ಬರ ನಡುವೆ ಜಗಳ ನಡೆದಿದ್ದು, ಜುಲೈ 10ರಂದು ಕೋಪಗೊಂಡ ಅಕ್ಬರ್ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರೋಶನಬಿ ಅವರ ಸಾವಿನ ಬಳಿಕ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಕ್ಬರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *