ಪಡುಬಿದ್ರಿ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಖಂಡಿಸಿದ್ದ ಹಿನ್ನೆಲೆಯಲ್ಲಿ ಮೊಹಮ್ಮದ್ ಆಸೀಫ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಅವರ ಪತ್ನಿಗೂ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ, ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ರಸ್ತೆಯಲ್ಲಿ ಜಗಳವಾಡಿ ಶಾಂತಿಭಂಗ ಉಂಟುಮಾಡಿದ ಆರೋಪದಡಿ ನಿತಿನ್, ರಿತಿಕ್ ಹಾಗೂ ವಿನೋದ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೇ ದಿನ ನಂದಿಕೂರು ಸಮೀಪ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂಲ್ಕಿ ನಿವಾಸಿ ಕಿರಣ್ ಕಟ್ಟಿಮನೆ (22) ಮೃತಪಟ್ಟಿದ್ದಾರೆ. ತಂದೆಗೆ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

