ಗದಗ: ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಜಿಲ್ಲಾ ಕಾರಾಗೃಹದ ವಾರ್ಡರ್ ಮಂಜಪ್ಪ ಮಜ್ಜಗಿ (41) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡದಿಂದ ಸ್ವಗ್ರಾಮ ನೀರಲಗಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿದ್ದ ಮಂಜಪ್ಪ ಅವರನ್ನು ಸ್ಥಳೀಯರು ಹಾಗೂ ಪೊಲೀಸರು ಹೊರತೆಗೆದಾಗಲೇ ಮೃತಪಟ್ಟಿರುವುದು ದೃಢಪಟ್ಟಿತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಲಾರಿ-ಕಾರು ಮುಖಾಮುಖಿ ಡಿಕ್ಕಿಯೇ ಕಾರಣ ಎನ್ನಲಾಗಿದ್ದು, ನಿಖರ ಕಾರಣದ ಕುರಿತು ನರಗುಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತ ಮಂಜಪ್ಪ ಅವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದು, ಕುಟುಂಬ ಮತ್ತು ಸಹೋದ್ಯೋಗಿಗಳಲ್ಲಿ ಶೋಕ ಮನೆಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

