ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಅಟಲ್ ಬಿಹಾರಿ ವಾಜಪೇಯಿ ಉದ್ಯಾನದಲ್ಲಿ ಸ್ನೇಹಿತರ ನಡುವೆ ನಡೆದ ಜಗಳ 19 ವರ್ಷದ ರಾಕೇಶ್ ಉರ್ಫ್ ರಾಕಿ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಮದ್ಯಪಾನದ ವೇಳೆ ₹7,500 ಹಣ ವಾಪಸ್ ಕೇಳಿದ ವಿಚಾರಕ್ಕೆ ಜಗಳವಾಗಿದ್ದು, ಆರೋಪಿ ಮೊದಲು ಮುಷ್ಠಿಯಿಂದ ಹಲ್ಲೆ ನಡೆಸಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಭಾನುವಾರ ಬೆಳಿಗ್ಗೆ ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

