Breaking News

ಪ್ರೀತಿಸಿ ಮದುವೆಯಾಗಿ ಮೂರೇ ತಿಂಗಳು – ನೇಣಿಗೆ ಶರಣಾದ ಟೀಚರ್!

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ 25 ವರ್ಷದ ಖಾಸಗಿ ಶಾಲಾ ಶಿಕ್ಷಕಿ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ ಶ್ವೇತಾ ಅವರು ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನನ್ನು ವಿವಾಹವಾಗಿದ್ದು, ಪತಿಯೊಂದಿಗೆ ಸುಂಕದಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶ್ವೇತಾ ಅವರ ಮೃತದೇಹ ಪತ್ತೆಯಾಗಿದ್ದು, ಮಾಹಿತಿ ತಿಳಿದ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತ್ಮಹತ್ಯೆಗೆ ಮುನ್ನ ಬರೆದಿಟ್ಟಿದ್ದಾರೆ ಎನ್ನಲಾದ ಡೆತ್‌ನೋಟ್‌ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಪ್ರೀತಿ ವಿವಾಹವಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆಗೆ ಕಾರಣವೇನು, ದಾಂಪತ್ಯದಲ್ಲಿ ಯಾವುದೇ ಸಮಸ್ಯೆ ಇತ್ತೇ ಅಥವಾ ಬೇರೆ ಮಾನಸಿಕ ಒತ್ತಡವೇ ಇದಕ್ಕೆ ಕಾರಣವಾಯಿತೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಡೆತ್‌ನೋಟ್‌ನ ಪರಿಶೀಲನೆಯ ಬಳಿಕವೇ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *