Breaking News

ಬ್ಯಾಂಕಾಕ್​ನ ಪಬ್​ವೊಂದರಲ್ಲಿ ಭೀಕರ ಅಗ್ನಿ ದುರಂತ: 27 ಜನ ಸಜೀವದಹನ, 63ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದಲ್ಲಿರುವ ನಾ ಲಾಡ್‌ಪ್ರಾ ಪಬ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು, 63ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು 30 ನಿಮಿಷಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಥಾಯ್ಲೆಂಡ್ ಪ್ರಧಾನಿ ಅನುತಿನ್ ಚರ್ನ್ವಿರಕುಲ್ ಪರಿಸ್ಥಿತಿ ಪರಿಶೀಲಿಸಿ, ಮೃತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಸಮಗ್ರ ತನಿಖೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಬ್‌ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೇದಿಕೆಯ ಸಮೀಪದ ಸರ್ಕ್ಯೂಟ್ ಬ್ರೇಕರ್‌ನಿಂದ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಸ್ಫೋಟ ಸಂಭವಿಸಿ ಬೆಂಕಿ ವೇಗವಾಗಿ ವ್ಯಾಪಿಸಿದೆ. ಭಯದಿಂದ ಕೆಲವರು ಶೌಚಾಲಯಗಳಲ್ಲಿ ಆಶ್ರಯ ಪಡೆದಿದ್ದರೂ, ಅಲ್ಲಿಯೇ ಹಲವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *