Breaking News

ಖಾಕಿ ಪಡೆಗೆ ಶಾಕ್: ಅರೆಸ್ಟ್ ಆದ 6 ಗಂಟೆಯಲ್ಲೇ ಪೊಲೀಸ್ ಠಾಣೆಯಿಂದ ಆರೋಪಿ ಪರಾರಿ!

ಬೀದರ್: ಜಿಲ್ಲೆಯ ಖಟಕಚಿಂಚೊಳಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ಬಂಧನಕ್ಕೊಳಗಾಗಿದ್ದ ಕೈಲಾಶ್ ಎಂಬ ಆರೋಪಿ ಅರೆಸ್ಟ್ ಆದ ಕೇವಲ ಆರು ಗಂಟೆಗಳಲ್ಲೇ ಠಾಣೆಯಿಂದಲೇ ಪರಾರಿಯಾಗಿದ್ದಾನೆ. ಠಾಣೆಯಲ್ಲಿದ್ದ ಸಿಬ್ಬಂದಿಯ ಬೇಜವಾಬ್ದಾರಿತನ ಹಾಗೂ ಸೂಕ್ತ ಕಾವಲು ಕೊರತೆಯೇ ಆರೋಪಿಯ ಎಸ್ಕೇಪ್‌ಗೆ ಕಾರಣ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಇಲಾಖಾ ತನಿಖೆಗೆ ಆದೇಶಿಸಿದ್ದಾರೆ. ಆರೋಪಿ ಪರಾರಿಯಾದ ಬಳಿಕ ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದು, ಗಡಿ ಭಾಗದ ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆಯನ್ನು ಹೆಚ್ಚಿಸಿ ವಿಶೇಷ ತಂಡಗಳನ್ನು ರಚಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಠಾಣೆಯಿಂದಲೇ ಆರೋಪಿ ಪರಾರಿಯಾಗಿರುವ ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಯನ್ನು ಶೀಘ್ರ ಬಂಧಿಸಿ, ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *