Breaking News

ಸ್ನಾನದ ವಿಡಿಯೋ ಇಟ್ಟುಕೊಂಡು ಕಾಟ ಕೊಡ್ತಿದ್ದ ಕಾಮುಕನಿಗೆ ಯಮಲೋಕ ದರ್ಶನ ; ಸ್ಕೆಚ್ ಹಾಕಿ ನೆರೆಮನೆ ಯುವಕನ ಕೊಂದ ದಂಪತಿ ಅರೆಸ್ಟ್ !

ಗುಜರಾತ್‌ನ ಗಾಂಧಿನಗರ ಜಿಲ್ಲೆಯಲ್ಲಿ ಖಾಸಗಿ ವಿಡಿಯೋ ಇಟ್ಟುಕೊಂಡು ವಿವಾಹಿತ ಮಹಿಳೆಯನ್ನು ಲೈಂಗಿಕ ಸಂಪರ್ಕಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ 20 ವರ್ಷದ ಯುವಕನನ್ನು ದಂಪತಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಯುವಕ ಎರಡು ತಿಂಗಳ ಹಿಂದೆ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ರಹಸ್ಯವಾಗಿ ಚಿತ್ರೀಕರಿಸಿ, ಅದನ್ನು ತೋರಿಸಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಮಹಿಳೆ ಈ ವಿಚಾರವನ್ನು ತನ್ನ ಪತಿಗೆ ತಿಳಿಸಿದ ಬಳಿಕ ಇಬ್ಬರೂ ಸೇರಿ ಹತ್ಯೆಯ ಸಂಚು ರೂಪಿಸಿದ್ದರು. ಶನಿವಾರ ಮಹಿಳೆ, “ಪತಿ ಮನೆಯಲ್ಲಿಲ್ಲ, ನಾನು ಒಂಟಿಯಾಗಿದ್ದೇನೆ” ಎಂದು ಯುವಕನನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಮನೆಗೆ ಬಂದ ಕೂಡಲೇ ಅಡಗಿದ್ದ ಪತಿ ಆತನ ಮೇಲೆ ದಾಳಿ ನಡೆಸಿದ್ದು, ಮಹಿಳೆ ಹಿಡಿದುಕೊಂಡಿದ್ದ ವೇಳೆ ಮೊದಲು ದುಪಟ್ಟಾದಿಂದ ಹಾಗೂ ನಂತರ ಫ್ಯಾನ್‌ನ ವಿದ್ಯುತ್ ತಂತಿಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಹತ್ಯೆಯ ಬಳಿಕ ಶವವನ್ನು ಬಿಳಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಮನೆಯ ಕಾಂಪೌಂಡ್‌ನೊಳಗೆ ಎಸೆದು ದಂಪತಿ ಪರಾರಿಯಾಗಿದ್ದರು. ಯುವಕನ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದರಿಂದ ಮತ್ತು ಸ್ಕೂಟರ್ ಮನೆಯಲ್ಲೇ ಇದ್ದುದರಿಂದ ಅನುಮಾನಗೊಂಡ ಸಂಬಂಧಿಕರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮಸ್ಥರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ವಶಕ್ಕೆ ಪಡೆದು, ದಂಪತಿಯನ್ನು ಬಂಧಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *