ರಾಜಧಾನಿ ಬೆಂಗಳೂರಿನ ಶೂಂಕರದಕಟ್ಟೆಯಲ್ಲಿ 25 ವರ್ಷದ ಶ್ವೇತಾ ಎಂಬ ಶಿಕ್ಷಕಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ವೇತಾ, ಕೇವಲ ನಾಲ್ಕು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಘಟನಾ ಸ್ಥಳವನ್ನು ಪರಿಶೀಲಿಸಿದ ಪೊಲೀಸರಿಗೆ ಶ್ವೇತಾ ಬರೆದಿಟ್ಟಿದ್ದಾರೆ ಎನ್ನಲಾದ ಡೆತ್ ನೋಟ್ ಲಭ್ಯವಾಗಿದೆ. ಈ ಡೆತ್ ನ ಫೋಟೋ ಕೂಡಾ ವೈರಲ್ ಆಗಿದ್ದು ಈ ಫೋಟೋದಲ್ಲಿ ನನ್ನ ಸಾವಿಗೆ ನನ್ನ ಗಂಡ, ಅವರ ಅಕ್ಕನೇ ಕಾರಣ. ಅವರಿಂದ ನನಗೆ ಹಿಂಸೆ ಆಗುತ್ತಿದೆ. ನನಗೆ ಮುಂದೆ ಬದುಕೋಕೂ ಆಸೆನೇ ಇಲ್ಲ ಅನ್ನೋ ರೀತಿ ಮಾಡಿದ್ದಾರೆ ಎಂದು ಬರೆಯಲಾಗಿದೆ. ಈ ಬಗ್ಗೆ ಪೊಲೀಸರು ಇನ್ನೂ ಖಚಿತಪಡಿಸಿಲ್ಲ. ಘಟನೆ ತಿಳಿದ ತಕ್ಷಣ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಆತ್ಮಹತ್ಯೆಗೆ ನಿಜವಾದ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

