Breaking News

ಬೆಂಗಳೂರು: ಡಿಸಿಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು, ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ ವಂಚಕರು ಸಾರ್ವಜನಿಕರಿಗೆ ಮೋಸ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಾಣಸವಾಡಿ ನಿವಾಸಿಯೊಬ್ಬರು ₹40 ಸಾವಿರ ಕಳೆದುಕೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರು ಡಿಸಿಪಿ ಹೆಸರಿನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ, ಸಿಆರ್‌ಪಿಎಫ್‌ನಿಂದ ನಿವೃತ್ತಿಯಾಗುತ್ತಿರುವ ಅಧಿಕಾರಿಯ ವಸ್ತುಗಳನ್ನು ಕಡಿಮೆ ಬೆಲೆಗೆ ನೀಡಲಾಗುತ್ತಿದೆ ಎಂದು ನಂಬಿಸಿ ಯುಪಿಐ ಮೂಲಕ ಹಣ ಪಡೆದುಕೊಂಡಿದ್ದಾರೆ. ಬಳಿಕ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟು, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಡಿಸಿಪಿ ನಾರಾಯಣ ಅವರು ಇಂತಹ ನಕಲಿ ಖಾತೆಗಳು ಮತ್ತು ಸಂದೇಶಗಳನ್ನು ನಂಬದೆ, ಹಣ ಪಾವತಿಸುವ ಮೊದಲು ಮಾಹಿತಿ ದೃಢೀಕರಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *