Breaking News

ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್‌ಐ ಭೈರಪ್ಪ ಅರೆಸ್ಟ್

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪ ಅವರನ್ನು ಪತ್ನಿಯ ಕೊಲೆ ಯತ್ನ ಹಾಗೂ ವರದಕ್ಷಿಣೆ ಕಿರುಕುಳ ಆರೋಪದಡಿ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಭೈರಪ್ಪ ಅವರು ಕಳೆದ ಕೆಲವು ಸಮಯದಿಂದ ಪತ್ನಿಗೆ ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹ ತಾರಕಕ್ಕೇರಿದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾಗಿದ್ದರೆಂದು ಆರೋಪಿಸಲಾಗಿದ್ದು, ಸಂತ್ರಸ್ತೆಯ ದೂರಿನ ಮೇರೆಗೆ ಆರಂಭದಲ್ಲಿ ಎನ್‌ಸಿಆರ್ ದಾಖಲಿಸಿದ್ದ ಪೊಲೀಸರು ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆ ಯತ್ನ, ದೈಹಿಕ ಹಲ್ಲೆ, ವರದಕ್ಷಿಣೆ ಕಿರುಕುಳ ಹಾಗೂ ಸಂಬಂಧಿತ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಪಿಎಸ್ಐಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕೆಂಗೇರಿ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *