ಉಡುಪಿ ಜಿಲ್ಲೆಯ ಕೋಟ ಸಮೀಪ ರಾಷ್ಟ್ರೀಯ ಹೆದ್ದಾರಿ-66ರ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಸಂಗೀತ ವ್ಯವಸ್ಥೆ ಅಳವಡಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ 25 ವರ್ಷದ ರಂಜಿತ್ ಸೋಮಯಾಜಿ ಎಂಬ ಯುವಕನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ನಡೆದ ಈ ಘಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಉದ್ದನೆಯ ಕೂದಲು ಮತ್ತು ಗಡ್ಡ ಹೊಂದಿದ್ದ ಯುವಕನ ವಿಚಿತ್ರ ವರ್ತನೆ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೂ ಕತ್ತಿ ಬೀಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ವಿಚಾರಣೆ ವೇಳೆ ಯುವಕ ಮಾನಸಿಕ ಅಸ್ವಸ್ಥನಾಗಿರಬಹುದೆಂಬ ಅನುಮಾನ ವ್ಯಕ್ತವಾದರೂ, ಅದಕ್ಕೆ ಸಂಬಂಧಿಸಿದ ಯಾವುದೇ ವೈದ್ಯಕೀಯ ದಾಖಲೆಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

