Breaking News

₹120 ಕೋಟಿ ಮೌಲ್ಯದ ಆದಿಚುಂಚನಗಿರಿ ಮಠದ ಜಮೀನು ಕಬಳಿಕೆ: ಸ್ಮಶಾನದ ಸಮಾಧಿ ಹುಡುಕಿ ಸ್ಕೆಚ್ ಹಾಕಿದ್ದ11 ಮಂದಿ ಅರೆಸ್ಟ್!

ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಸೇರಿದ ₹120 ಕೋಟಿ ಮೌಲ್ಯದ 6 ಎಕರೆ ಜಮೀನನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಿದ ಪ್ರಕರಣವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ 6 ಸರ್ಕಾರಿ ಅಧಿಕಾರಿಗಳು ಸೇರಿದಂತೆ ಒಟ್ಟು 11 ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ನರೇಶ್ ಗೌಡ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ಸ್ಮಶಾನದಲ್ಲಿ ಮೂಲ ಜಮೀನಿನ ಮಾಲೀಕರ ಹೆಸರಿನ ಸಮಾಧಿ ಪತ್ತೆಹಚ್ಚಿ, ಅದನ್ನು ಆಧರಿಸಿ ನಕಲಿ ವಂಶವೃಕ್ಷ ಹಾಗೂ ಸಾಲಾವಳಿ ಪತ್ರಗಳನ್ನು ಸೃಷ್ಟಿಸಿದ್ದರು. ಬಳಿಕ ಕಂದಾಯ ಇಲಾಖೆಯ ಕೆಲ ಅಧಿಕಾರಿಗಳ ಸಹಕಾರದಿಂದ ಪೌತಿ ಖಾತೆ ಮಾಡಿಸಿಕೊಂಡು ಜಮೀನನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ಪ್ರಕರಣದ ತನಿಖೆಯಲ್ಲಿ ಸರ್ಕಾರಿ ಅಧಿಕಾರಿಗಳ ಶಾಮೀಲಾತಿ ಬೆಳಕಿಗೆ ಬಂದಿದೆ. ಉಳಿದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದ್ದು, ಬೆಂಗಳೂರಿನ ಸುತ್ತಮುತ್ತ ಇಂತಹ ಭೂ ಕಬಳಿಕೆ ಜಾಲಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಅನಿತಾ ಹದ್ದಣ್ಣನವರ್ ತಿಳಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *