Breaking News

ಬೆಂಗಳೂರು | ಆಭರಣ ಕಳ್ಳತನ: ಕೇರ್‌ಟೇಕರ್ ಬಂಧನ

ಬೆಂಗಳೂರು: ಮನೆಯಲ್ಲಿ ವೃದ್ಧ ದಂಪತಿ ನಿದ್ರಿಸುತ್ತಿದ್ದ ವೇಳೆ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಪರಾರಿ ಆಗಿದ್ದ ಕೇರ್‌ಟೇಕರ್‌ನನ್ನು ಪುಲಕೇಶಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ರಮಣಿ (48) ಬಂಧಿತ ಆರೋಪಿ. ಆರೋಪಿಯಿಂದ ₹2 ಲಕ್ಷ ಮೌಲ್ಯದ 17 ಗ್ರಾಂ ಆಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.ಪುಲಕೇಶಿನಗರ ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ ವೃದ್ಧ ದಂಪತಿ ನೆಲಸಿದ್ದರು. ಅವರನ್ನು ನೋಡಿಕೊಳ್ಳಲು ರಮಣಿ ಅವರನ್ನು ನೇಮಿಸಲಾಗಿತ್ತು. ಜುಲೈ 17ರಂದು ವೃದ್ಧ ದಂಪತಿ ನಿದ್ರಿಸುತ್ತಿದ್ದ ವೇಳೆ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಆರೋಪಿ ಪರಾರಿ ಆಗಿದ್ದರು. ಆರೋಪಿಯನ್ನು ಪತ್ತೆ ಮಾಡಿ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಯಿತು. ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *