Breaking News

ಚರಂಡಿ ನೀರು ಬಿಡುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ತೋಲಗಿ ಗ್ರಾಮದಲ್ಲಿ ಚರಂಡಿ ನೀರು ಬಿಡುವ ವಿಚಾರಕ್ಕೆ ನೆರೆಹೊರೆಯವರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಅಮೀರ್ ಮಕ್ತುಮ್ ಹುಸೇನ್ ಪಾಶ್ಘಾಪೂರ ಮೃತಪಟ್ಟಿದ್ದು, ಅಶೋಕ್ ರಾಮಪ್ಪ ಉಗರಕೋಡ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಾತಿನ ಚಕಮಕಿ ವೇಳೆ ಆರೋಪಿ ಕಬ್ಬಿಣದ ಸಲಕಿಯಿಂದ ಅಮೀರ್ ಅವರ ಎದೆಗೆ ಚುಚ್ಚಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಅವರು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *