Breaking News

ಹುಬ್ಬಳ್ಳಿಯಲ್ಲಿ ಯುವಕ ಅಪಹರಿಸಿ ಅಮಾನವೀಯ ಹಲ್ಲೆ: ಬೆತ್ತಲೆಗೊಳಿಸಿ ಥಳಿಸಿದ ದುಷ್ಕರ್ಮಿಗಳು

ಹುಬ್ಬಳ್ಳಿ: ನಗರದಲ್ಲಿ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯವೊಂದು ಬೆಳಕಿಗೆ ಬಂದಿದೆ. ಕೆಲಸಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ಅಪಹರಿಸಿ, ಶೆಡ್‌ನಲ್ಲಿ ಕೂಡಿ ಹಾಕಿ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಹಲ್ಲೆಗೊಳಗಾದ ಯುವಕನನ್ನು ತೌಫಿಕ್ ಎಂದು ಗುರುತಿಸಲಾಗಿದೆ. ಅಶೋಕನಗರ ಬ್ರಿಡ್ಜ್ ಸಮೀಪ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಆತನನ್ನು ಅಪಹರಿಸಿ, ಮಂಟೂರ ರಸ್ತೆಯ ಮೌಲಾಲಿ ದರ್ಗಾ ಬಳಿಯ ಶೆಡ್‌ಗೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ಆರೋಪಿಗಳು ತೌಫಿಕ್‌ರನ್ನು ಬೆತ್ತಲೆಗೊಳಿಸಿ ಕೈಗೆ ಸಿಕ್ಕ ವಸ್ತುಗಳಿಂದ ದೇಹದ ವಿವಿಧ ಭಾಗಗಳಿಗೆ ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ತೌಫಿಕ್ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಮುಂದುವರಿದಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ. ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *