Breaking News

ಬೆಂಗಳೂರಲ್ಲಿ ಜಿಮ್ ಟ್ರೇನರ್ ನ ಅಪಹರಿಸಿ 5 ಲಕ್ಷ ಹಣಕ್ಕೆ ಬೇಡಿಕೆ : ರೌಡಿಶೀಟರ್ ಸೇರಿ ಐವರು ಅರೆಸ್ಟ್!

ಬೆಂಗಳೂರು: ಜಿಮ್ ಟ್ರೈನರ್‌ನನ್ನು ಸಿಸಿಬಿ ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ಅಪಹರಿಸಿ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ರೌಡಿಶೀಟರ್ ತ್ರಿವೇಣಿ ಅಲಿಯಾಸ್ ತಿರುಮಲ ರಂಜಿತ್ ರಾವ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆರೋಪಿಗಳು ಜಿಮ್ ಟ್ರೈನರ್ ಮಿಥುಲ್‌ಗೆ “500 ಕೆಜಿ ಗಾಂಜಾ ತರಿಸಿದ್ದೀಯ” ಎಂದು ಬೆದರಿಸಿ, ಎನ್‌ಡಿಪಿಎಸ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೇಳಿ ಕಾರಿನಲ್ಲಿ ನಾಲ್ಕು ಗಂಟೆಗಳ ಕಾಲ ಬೆಂಗಳೂರಿನ ವಿವಿಧೆಡೆ ಸುತ್ತಾಡಿಸಿದ್ದರು. ಜೆಪಿ ನಗರ ಪೊಲೀಸ್ ಠಾಣೆ ಬಳಿ ಕಾರು ನಿಲ್ಲಿಸಿ, ಠಾಣೆಯೊಳಗೆ ಹೋಗಿ ಬಂದಂತೆ ನಾಟಕವಾಡಿ ತಮ್ಮನ್ನು ನಿಜವಾದ ಅಧಿಕಾರಿಗಳೆಂದು ನಂಬಿಸುವ ಪ್ರಯತ್ನ ಮಾಡಿದ್ದರು. ಈ ಕುರಿತು ಜೂನ್ 22ರಂದು ಶಂಕರಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಳಿಕ ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಟಿವಿ ದೃಶ್ಯಗಳು ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಐವರನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳು ಈಗಾಗಲೇ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *