Breaking News

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ಫೈರಿಂಗ್: ಜೈಲಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು

ಕಲಬುರಗಿ: ಜೈಲಿನಿಂದ ಪರಾರಿಯಾಗಿದ್ದ ಕೈದಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಕೈದಿ ಸಂತೋಷ್ ಕಾಲಿಗೆ ಗುಂಡು ತಗುಲಿದ್ದು, ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೈಲಿನಿಂದ ಪರಾರಿಯಾಗಿದ್ದ ಮೂವರು ಕೈದಿಗಳಿಗಾಗಿ ಪೊಲೀಸರು ನಾಕಾಬಂಧಿ ನಡೆಸುತ್ತಿದ್ದ ವೇಳೆ, ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಸಂತೋಷ್ ಅಡಗಿರುವ ಮಾಹಿತಿ ಲಭ್ಯವಾಗಿತ್ತು. ಶರಣಾಗುವಂತೆ ಸೂಚಿಸಿದರೂ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಸಂತೋಷ್ ಪೊಲೀಸ್ ವಶದಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಜೈಲಿನಿಂದ ಪರಾರಿಯಾಗಿರುವ ಉಳಿದ ಇಬ್ಬರು ಕೈದಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಶೋಧ ಕಾರ್ಯ ಮುಂದುವರಿದಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *