Breaking News

ಬೆಳಗಾವಿಯಲ್ಲಿ ಮತ್ತೊಂದು ಮಹಾವಂಚನೆ.. 160 ಕೋಟಿ ರೂ. ದೋಚಿ ದುಬೈಗೆ ಪರಾರಿಯಾದ ‘ಅಪೇಕ್ಷಾ’ ಕಂಪನಿ ವಂಚಕರು!

ಬೆಳಗಾವಿಯಲ್ಲಿ ಭಾರೀ ಹಣಕಾಸು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ‘ಅಪೇಕ್ಷಾ’ ಕಂಪನಿ 3,500ಕ್ಕೂ ಹೆಚ್ಚು ಹೂಡಿಕೆದಾರರಿಗೆ ಬರೋಬ್ಬರಿ 160 ಕೋಟಿ ರೂಪಾಯಿ ವಂಚಿಸಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಂಕ್‌ಗಳಿಗಿಂತ ಹೆಚ್ಚಿನ ಬಡ್ಡಿ ಹಾಗೂ ಅಲ್ಪಾವಧಿಯಲ್ಲಿ ಹಣ ದ್ವಿಗುಣ ಮಾಡುವ ಆಮಿಷವೊಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹಿಸಲಾಗಿದೆ. ಆರಂಭದಲ್ಲಿ ನಂಬಿಕೆ ಗಳಿಸಿದ್ದ ಕಂಪನಿ, ಬಳಿಕ ಕಚೇರಿಯನ್ನು ರಾತ್ರೋರಾತ್ರಿ ಮುಚ್ಚಿ ಪರಾರಿಯಾಗಿದೆ. ಕಂಪನಿಯ ಮುಖ್ಯಸ್ಥರು ಕೋಟ್ಯಂತರ ರೂಪಾಯಿ ಹಣದೊಂದಿಗೆ ದುಬೈಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇದರಿಂದ ತಮ್ಮ ಜೀವನದ ಉಳಿತಾಯ ಕಳೆದುಕೊಂಡ ನೂರಾರು ಹೂಡಿಕೆದಾರರು ಪೊಲೀಸ್ ಠಾಣೆಗಳಿಗೆ ತೆರಳಿ ದೂರು ದಾಖಲಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದು, ಆರೋಪಿಗಳ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣವು ಬೆಳಗಾವಿಯಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *