Breaking News

ಜಿಮ್ಖಾನಾ ಕ್ಲಬ್ ನಲ್ಲಿ ಗುಂಡಿಕ್ಕಿ ವ್ಯಕ್ತಿಯೋರ್ವನ ಕೊಲೆಗೆ ಯತ್ನ

ಬೆಳಗಾವಿ: ನಗರದ ಜಿಮ್ಖಾನಾ ಕ್ಲಬ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸುರೇಶ್ ಜಾಲಗಾರ ಹತ್ಯೆ ಯತ್ನಕ್ಕೊಳಗಾದ ವ್ಯಕ್ತಿಯಾಗಿದ್ದು, ದುಷ್ಕರ್ಮಿಗಳು ಕ್ಲಬ್‌ಗೆ ನುಗ್ಗಿ ಗನ್‌ನಿಂದ ಹಲ್ಲೆ ನಡೆಸಿ ಗುಂಡು ಹಾರಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ವೇಳೆ ಐವರು ದುಷ್ಕರ್ಮಿಗಳು ಕ್ಲಬ್‌ಗೆ ಆಗಮಿಸಿದ್ದು, ಮೂವರು ಒಳಗೆ ನುಗ್ಗಿ ಸುರೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗನ್‌ನಿಂದ ತಲೆಗೆ ಹೊಡೆದು ಬಳಿಕ ಗುಂಡು ಹಾರಿಸಿದ್ದು, ಸುರೇಶ್ ಆರೋಪಿಗಳನ್ನು ತಳ್ಳಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಮತ್ತೆರಡು ಸುತ್ತು ಗುಂಡು ಹಾರಿಸಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೊಕೊ ತಂಡವೂ ಸಾಕ್ಷ್ಯ ಸಂಗ್ರಹಿಸಿದೆ. ಈ ಹಿಂದೆ ಪ್ರಫುಲ್ ಪಾಟೀಲ್ ಮೇಲಿನ ದಾಳಿಗೆ ಪ್ರತೀಕಾರವಾಗಿ ತನ್ನ ಮೇಲೆ ಫೈರಿಂಗ್ ನಡೆಸಲಾಗಿದೆ ಎಂದು ಸುರೇಶ್ ಜಾಲಗಾರ ಆರೋಪಿಸಿದ್ದಾರೆ. ಅವರನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದು, ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಲಾಗಿದೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *