Breaking News

ಹುಬ್ಬಳ್ಳಿಯಲ್ಲಿ ಬೆಚ್ಚಿಬೀಳಿಸುವ ಘಟನೆ..! ಕೆಲಸಕ್ಕೆ ತೆರಳುತ್ತಿದ್ದ ಯುವಕನ ಕಿಡ್ನ್ಯಾಪ್ ಆರೋಪ | ಶೆಡ್ಡಿನಲ್ಲಿ ಅಮಾನುಷ ಹಲ್ಲೆ…

ಹಲವು ಗಂಟೆಗಳು ಕಳೆದರೂ ಆರೋಪಿಗಳ ಬಂಧನವಿಲ್ಲ..! ಹುಬ್ಬಳ್ಳಿಯಲ್ಲಿ ಯುವಕನ ಕಿಡ್ನ್ಯಾಪ್ ಆರೋಪ, ಶೆಡ್ಡಿನಲ್ಲಿ ಅಮಾನುಷ ಹಲ್ಲೆ..!

ಹಲವು ಗಂಟೆಗಳು ಕಳೆದರೂ ಪೊಲೀಸರಿಗೆ ಸಿಕ್ಕಿಲ್ಲ ಆರೋಪಿಗಳು..! ಹುಬ್ಬಳ್ಳಿಯಲ್ಲಿ ಯುವಕನ ಅಪಹರಣ ಆರೋಪ, ಬೆತ್ತಲೆಗೊಳಿಸಿ ಕ್ರೂರ ಹಲ್ಲೆ..!

ಹಗಲು ಹೊತ್ತಲ್ಲೇ ಕಿಡ್ನ್ಯಾಪ್..! ಶೆಡ್ಡಿನಲ್ಲಿ ಬೆತ್ತಲೆಗೊಳಿಸಿ ಕ್ರೂರ ಹಲ್ಲೆ – ಪುಂಡರ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಹುಬ್ಬಳ್ಳಿ..!

ಹುಬ್ಬಳ್ಳಿ: ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಕೆಲಸಕ್ಕೆ ತೆರಳುತ್ತಿದ್ದ ತೌಫಿಕ್ ಎಂಬ ಯುವಕನನ್ನು ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ಅಪಹರಿಸಿ, ಮಂಟೂರು ರಸ್ತೆಯ ಮೌಲಾಲಿ ದರ್ಗಾ ಬಳಿಯ ಶೆಡ್‌ಗೆ ಕರೆದೊಯ್ದು ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ…

ಗಂಭೀರವಾಗಿ ಗಾಯಗೊಂಡಿರುವ ಯುವಕ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ…

ಈ ಘಟನೆಗೆ ಸಂಬಂಧಿಸಿದಂತೆ ಹಲವು ಗಂಟೆಗಳು ಕಳೆದರೂ ಪ್ರಮುಖ ಆರೋಪಿಗಳು ಇನ್ನೂ ಪೊಲೀಸರ ವಶಕ್ಕೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಆರೋಪಿಗಳ ಬಂಧನದಲ್ಲಿ ವಿಳಂಬ ಏಕೆ..? ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸುತ್ತಿಲ್ಲವೇ..? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ…

ನಗರದ ಮಧ್ಯಭಾಗದಲ್ಲೇ ಇಂತಹ ಅಮಾನವೀಯ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ವ್ಯಕ್ತವಾಗಿದೆ…

ಜೊತೆಗೆ ಇಂತಹ ಪುಂಡರ ವಿರುದ್ಧ ಯಾವುದೇ ಮುಲಾಜಿಲ್ಲದೆ ಪೊಲೀಸರು ಹೆಡೆಮುರಿ ಕಟ್ಟಿ ಕಾರ್ಯಾಚರಣೆ ನಡೆಸಬೇಕಿದೆ. ಕಾನೂನಿನ ಭಯ ಮೂಡಿಸುವಂತೆ ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಿದಾಗ ಮಾತ್ರ ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಬೀಳಲಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ….

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *