Breaking News

ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶ: ಮತ್ತಿಬ್ಬರ ಬಂಧನ

ಕಾಸರಗೋಡು: ಕಾರಿನಲ್ಲಿ ಸಾಗಿಸಲಾಗುತ್ತಿದ್ದ 31 ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪರಾರಿಯಾಗಿದ್ದ ಇನ್ನಿಬ್ಬರು ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಂಞಂಗಾಡ್‌ನ ಟಿ.ಎಂ. ಶಮೀರ್ (40) ಮತ್ತು ನೀಲೇಶ್ವರದ ಟಿ. ಶಂಸೀರ್ (33) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಈ ಹಿಂದೆ ಕಬೀರ್ ಯಾನೆ ಲಾಲಾ ಕಬೀರ್ (40) ಹಾಗೂ ಮೊಹಮ್ಮದ್ ಮಿರ್ಶಾನ್ (34) ಬಂಧಿತರಾಗಿದ್ದರು. ಖಚಿತ ಮಾಹಿತಿಯ ಆಧಾರದಲ್ಲಿ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾ ಸಮೀಪ ವಾಹನ ತಪಾಸಣೆ ನಡೆಸಿದ ವೇಳೆ ಕಾರಿನಲ್ಲಿ 31 ಕೆಜಿ ಗಾಂಜಾ ಪತ್ತೆಯಾಗಿತ್ತು. ಕಾರ್ಯಾಚರಣೆ ವೇಳೆ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಈಗಾಗಲೇ ಬಂಧಿತರಾದವರ ವಿಚಾರಣೆಯಿಂದ ದೊರೆತ ಮಾಹಿತಿಯ ಆಧಾರದಲ್ಲಿ ಅವರನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಇದೇ ವೇಳೆ, ಚೆರ್ಕಳ ಸಮೀಪದ ಇಂದಿರಾನಗರದಲ್ಲಿ ವಿದ್ಯಾನಗರ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 2 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಕೆ.ಎ. ಮುಹಮ್ಮದ್ ಅಫೀಸ್ (29) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಎಂಡಿಎಂಎ ಜೊತೆಗೆ ಆತ ಸಂಚರಿಸುತ್ತಿದ್ದ ಸ್ಕೂಟರ್‌ನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *